ಮಂಗಳೂರು : ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಬಸ್ಸ್ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ.
ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಎಸ್ ಬಸ್ ಚಾರ್ಮಾಡಿ ಘಾಟ್ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿದೆ. ಆದರೆ, ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರ ಜೀವ ಉಳಿದಿದೆ. ಅಪಾಯದ ಅರಿವಾಗುತ್ತಿದ್ದಂತೆಯೇ ಕೂಡಲೇ ಚಾಲಕ ಸಮಯ ಪ್ರಜ್ಞೆ ಮೆರೆದು ಬಸ್ಸನ್ನು ನಿಯಂತ್ರಣಕ್ಕೆ ತೆಗೆದುಕೊಂಡು ರಸ್ತೆ ಬದಿಗೆ ಬಸ್ ನಿಲ್ಲಿಸಿದ್ದಾರೆ. ಇದರಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಬಸ್ನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್ನಲ್ಲಿ ಕಳುಹಿಸಿಕೊಡಲು ವ್ಯವಸ್ಥೆ ಮಾಡಿದ್ದಾರೆ, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.