Home ನಮ್ಮ ಜಿಲ್ಲೆ ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ

ಚಂದ್ರಯಾನ-3ರ ಕೌಂಟ್‌ಡೌನ್‌ಗೆ ಧ್ವನಿಯಾಗಿದ್ದ ಇಸ್ರೋ ವಿಜ್ಞಾನಿ ವಲರ್ಮತಿ ಹೃದಯಾಘಾತದಿಂದ ನಿಧನ

0

ಬೆಂಗಳೂರು: ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್‌ಗಳ ಕೌಂಟ್‌ಡೌನ್‌ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ ಎಂದು ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.
ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯ ಸಂದರ್ಭದಲ್ಲಿ ಕೌಂಟ್‌ಡೌನ್‌ಗೆ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ವಿಜ್ಞಾನಿ ವಲರ್ಮತಿ ಅವರು ಹೃದಯಾಘಾತದಿಂದ ಭಾನುವಾರ ನಿಧನರಾಗಿದ್ದಾರೆ.
ವಲರ್ಮತಿ ಆರ್‌ಐಎಸ್‌ಎಟಿ-1ರ ಪಾಜೆಕ್ಟ್ ಡೈರೆಕ್ಟರ್ ಆಗಿದ್ದು, 2015ರಲ್ಲಿ ಸರ್ಕಾರ ನೀಡಿದ ಅಬ್ದುಲ್ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದರು. ದೇಶದ ಮೂರನೇ ಚಂದ್ರಯಾನವಾದ ಚಂದ್ರಯಾನ-3 (Chandrayaan-3) ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್‌ಡೌನ್‌ಗೆ ಇವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು.

Exit mobile version