ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಲ್ಲಲ್ಲಿ ಸಂಪರ್ಕ ಕಡಿತ

0
13

ಚಿಕ್ಕಮಗಳೂರು: ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅಲ್ಲಲ್ಲಿ ಸೇತುವೆಗಳು ಮುಳುಗಿದ್ದು, ಸಂಪರ್ಕ ಕಡಿತಗೊಂಡಿದೆ. ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಬಾಳೆಹೊನ್ನೂರು–ಮಾಗುಂಡಿ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ಸಂಪರ್ಕ ಕಡಿತಗೊಂಡಿದೆ.

ಹಲವೆಡೆ ಸೇತುವೆಗಳ ಮೇಲೆ ನೀರು ಹರಿಯುತ್ತಿದೆ. ಕಳಸ–ಬಾಳೆಹೊನ್ನೂರು ನಡುವಿನ ತೆಪ್ಪದಗುಂಡಿ, ಬೈರೇಗುಡ್ಡದಲ್ಲಿ ರಸ್ತೆ ಮೇಲೆ ಭದ್ರಾ ನದಿ ನೀರು ಹರಿಯುತ್ತಿದ್ದು, ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ ಉಂಟಾಗಿತ್ತು. 9ನೇ ತಿರುವಿನಲ್ಲಿ ಭೂಕುಸಿತ ಉಂಟಾಗಿ 2 ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಎದುರಾಗಿತ್ತು. ರಸ್ತೆ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಮರಗಳನ್ನು ತೆರವು ಮಾಡಿ, ಸಂಚಾರಕ್ಕೆ ಅನುಕೂಲ ಕಲ್ಪಿಸಲಾಗಿದೆ

Previous articleಚಿಕ್ಕಮಗಳೂರು ಜಿಲ್ಲೆಯ ಐದು ತಾಲ್ಲೂಕಿನ ಶಾಲಾ –ಕಾಲೇಜುಗಳಿಗೆ ರಜೆ
Next articleತಾಯಿ ಮೇಲೆ ಕೊಡಲಿಯಿಂದ ಹಲ್ಲೆ