Home ನಮ್ಮ ಜಿಲ್ಲೆ ಧಾರವಾಡ ಚಿಗರಿ ಬಸ್ ಡಿಕ್ಕಿ, ಮೂವರಿಗೆ ಗಾಯ

ಚಿಗರಿ ಬಸ್ ಡಿಕ್ಕಿ, ಮೂವರಿಗೆ ಗಾಯ

0

ಹುಬ್ಬಳ್ಳಿ: ನಗರದ ಕಿಮ್ಸ್ ಮುಖ್ಯ ದ್ವಾರ ಸಮೀಪ ಬಿಆರ್‌ಟಿಎಸ್ ಬಸ್ಸೊಂದು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.

ಬಿಆರ್‌ಟಿಎಸ್ ಮಾರ್ಗದಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಧಾರವಾಡ ಕಡೆ ಚಲಿಸುತ್ತಿದ್ದ ಚಿಗರಿ ಬಸ್ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಬಸ್‌ನ ಮುಂಭಾಗ ಜಖಂ ಗೊಂಡಿದೆ. ಘಟನೆಯಲ್ಲಿ ಮೂವರು ಪ್ರಯಾಣಿಕರಿಗೆ ಸಣ್ಣ ಪ್ರಮಾಣದ ಗಾಯಗಳಾಗಿವೆ. ಘಟನೆಯಿಂದ ಬಿಆರ್‌ಟಿಎಸ್ ಮಾರ್ಗದಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

Exit mobile version