ಚಿತ್ರಮಂದಿರದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

0
8

ಅಮರನ್ ಸಿನಿಮಾ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರದ ಮೇಲೆ ಶನಿವಾರ ಮುಂಜಾನೆ ಅಪರಿಚಿತ ವ್ಯಕ್ತಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ತಮಿಳುನಾಡಿನ ತಿರುನೆಲ್ವೇಲಿಯಲ್ಲಿ ಈ ಘಟನೆ ನಡೆದಿದು ಪೊಲೀಸರ ಪ್ರಕಾರ, ಶನಿವಾರ ಮುಂಜಾನೆ ಇಬ್ಬರು ಅಪರಿಚಿತ ವ್ಯಕ್ತಿಗಳು ತಿರುನಲ್ವೇಲಿಯ #ಮೇಲಪಾಳ್ಯಂನಲ್ಲಿರುವ #ಅಲಂಗಾರ್ ಸಿನಿಮಾಸ್ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ. ಆದರೆ, ಆ ಸಮಯದಲ್ಲಿ ಆವರಣ ಖಾಲಿ ಇದ್ದ ಕಾರಣ ಯಾರಿಗೂ ಗಾಯಗಳಾಗಿಲ್ಲ. ಇಬ್ಬರು ವ್ಯಕ್ತಿಗಳು #ಪೆಟ್ರೋಲ್ ಬಾಂಬ್ ಎಸೆದಿರುವುದನ್ನು ತೋರಿಸುವ ಸಿಸಿಟಿವಿ ಕ್ಯಾಮೆರಾ ವಿಡಿಯೋ ದೃಶ್ಯಾವಳಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಮತ್ತು ಅಪರಾಧಿಗಳನ್ನು ಗುರುತಿಸಲು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಥಿಯೇಟರ್‌ನಲ್ಲಿ ಪ್ರದರ್ಶನಗೊಳ್ಳುತ್ತಿರುವ #ಶಿವಕಾರ್ತಿಕೇಯನ್ ಅಭಿನಯದ ‘ಅಮರನ್’ ಚಿತ್ರವು ಜಮ್ಮು-ಕಾಶ್ಮೀರದ 44 ನೇ ರಾಷ್ಟ್ರೀಯ ರೈಫಲ್ಸ್ ಬೆಟಾಲಿಯನ್‌ಗೆ ನಿಯೋಜನೆಯಲ್ಲಿದ್ದಾಗ ಸೇನಾ ಕಾರ್ಯಾಚರಣೆಯಲ್ಲಿ ಹುತಾತ್ಮರಾದ # ಸೇನಾ ಮೇಜರ್ ಮುಕುಂದ್ ವರದರಾಜನ್ ಅವರ ಜೀವನಚರಿತ್ರೆಯ ರೂಪಾಂತರವಾಗಿದೆ, ಸಿನಿಮಾ ವಿರೋಧಿಸಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಸಾಧ್ಯತೆ ಸೇರಿದಂತೆ ವಿವಿಧ ಕೋನಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous articleಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ತುಂತುರು ಮಳೆ
Next articleಆತ್ಮನಿರ್ಭರ ಭಾರತ ಸಾಕಾರಕ್ಕೆ ಯುವ ತಂತ್ರಜ್ಞರಿಗೆ ಉತ್ತೇಜನ: ಡಾ.ಅಭಯ ಕರಂದೀಕರ್