ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಹಿಂಡಲಗಾದ ಗಣಪತಿ ಮಂದಿರಕ್ಕೆ ತೆರಳಿ ಗಣಪತಿಗೆ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರಕ್ಕೆ ವಿದ್ಯುಕ್ತ ಚಾಲನೆ ನೀಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು ಇದು ನಮ್ಮ ಕರ್ಮ ಭೂಮಿ, ನಮ್ಮ ಕುಟುಂಬದ ಸಂಪ್ರದಾಯದಂತೆ ಯಾವುದೇ ಕೆಲಸ ಮಾಡುವ ಮುನ್ನ ಗಣೇಶನಿಗೆ ಪೂಜೆ ಸಲ್ಲಿಸುತ್ತೇವೆ. ಅದೇ ರೀತಿ ಪೂಜೆ ಮಾಡಿ, ಪ್ರಚಾರ ಆರಂಭಿಸಿದ್ದೇವೆ. ಪ್ರತಿಯೊಬ್ಬ ಮತದಾರ ಕೂಡ ನಿರ್ಣಾಯಕ ಮನಸ್ಸಿಂದ ಹೇಳಲು ಬಯಸುತ್ತೇನೆ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಗುತ್ತೆನೆ ಎಂದಿದ್ದಾರೆ.
