Home Advertisement
Home ತಾಜಾ ಸುದ್ದಿ ಚುನಾವಣಾ ಬಾಂಡ್‌ ಯೋಜನೆ ರದ್ದುಗೊಳಿಸಿದ ಸುಪ್ರೀಂ

ಚುನಾವಣಾ ಬಾಂಡ್‌ ಯೋಜನೆ ರದ್ದುಗೊಳಿಸಿದ ಸುಪ್ರೀಂ

0
103

ಹೊಸದಿಲ್ಲಿ: ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಮೂಲಕ ದೇಣಿಗೆ ಸಂಗ್ರಹಿಸುವ ಯೋಜನೆಯು ‘ಅಸಾಂವಿಧಾನಿಕ’ ಎಂದು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಮಹತ್ವದ ತೀರ್ಪು ನೀಡಿದೆ.
ಎಲೆಕ್ಟೊರಲ್ ಬಾಂಡ್ ಯೋಜನೆಯು ನಾಗರಿಕರ ಮಾಹಿತಿ ತಿಳಿಯುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿದೆ. ಈ ತಕ್ಷಣದಿಂದಲೇ ಎಲೆಕ್ಟೊರಲ್ ಬಾಂಡ್‌ಗಳ ವಿತರಣೆಯನ್ನು ನಿಲ್ಲಿಸುವಂತೆ ಅದು ಭಾರತೀಯ ಸ್ಟೇಟ್ ಬ್ಯಾಂಕ್‌ಗೆ (ಎಸ್‌ಬಿಐ) ಸೂಚನೆ ನೀಡಿದೆ. ಚುನಾವಣಾ ಬಾಂಡ್‌ಗಳ ಯೋಜನೆಯು ಆರ್ಟಿಕಲ್ 19(1)(ಎ) ಅನ್ನು ಉಲ್ಲಂಘಿಸುತ್ತದೆ ಮತ್ತು ಅಸಂವಿಧಾನಿಕವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇಲೆಕ್ಟೋರಲ್ ಬಾಂಡ್ ಯೋಜನೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್. ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಯೋಜನೆಯನ್ನು ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ಎರಡು ಪ್ರತ್ಯೇಕ, ಸರ್ವಾನುಮತದ ತೀರ್ಪುಗಳನ್ನು ಪ್ರಕಟಿಸಿದೆ. ಬ್ಯಾಂಕ್‌ಗಳು ಚುನಾವಣಾ ಬಾಂಡ್‌ಗಳ ವಿತರಣೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

Previous articleತಪ್ಪನ್ನು ಪ್ರತಿಭಟಿಸಿದವರ ವಿರುದ್ಧ ಮೊಕದ್ದಮೆ
Next articleಅಭಿವೃದ್ಧಿ ಹೊಂದಲು ಪಾರದರ್ಶಕತೆಯ ಅಗತ್ಯವಿದೆ