ಚುನಾವಣೆ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ: ಕ್ಷೇತ್ರ ಆಯ್ಕೆ ಹೈಕಮಾಂಡ್‌ ಹೆಗಲಿಗೆ

0
14
ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೆಪಿಸಿಸಿ ಕಚೇರಿಯಲ್ಲಿ ವಿಧಾನಸಭಾ ಚುನಾವಣೆಯ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಪರವಾಗಿ ಅವರ ಆಪ್ತ ಸಹಾಯಕ ವೆಂಕಟೇಶ್ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಎಲ್ ನಾರಾಯಣ್ ಅವರಲ್ಲಿ ಅರ್ಜಿ‌ ಸಲ್ಲಿಸಿದ್ದಾರೆ. ಆದರೆ ಸಿದ್ದರಾಮಯ್ಯ ಅರ್ಜಿ ಬೇರೆಲ್ಲ ನಾಯಕರ ಅರ್ಜಿಗಿಂತ ಭಿನ್ನವಾಗಿದ್ದು ಯಾವುದೇ ಕ್ಷೇತ್ರದ ಟಿಕೆಟ್ ಕೇಳಿಲ್ಲ. ತಮಗೆ ಯಾವ ಕ್ಷೇತ್ರದ ಟಿಕೆಟ್ ನೀಡಬೇಕು ಎಂಬ ಜವಾಬ್ದಾರಿಯನ್ನು ಹೈಕಮಾಂಡ್‌ಗೆ ಬಿಟ್ಟಿದ್ದಾರೆ.

Previous articleಕಾಂಗ್ರೆಸ್ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಡಿಲಿಟ್: ಚಿಂಚೋರೆ ಆರೋಪ
Next articleಹಾಲಿನ ದರ ಏರಿಕೆ ಸದ್ಯಕ್ಕಿಲ್ಲ: ಗ್ರಾಹಕರ ಹಿತ ಕಾಪಾಡಲು ಸಿಎಂ ಸೂಚನೆ