ಚೊಂಬು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

0
20

ಮಂಡ್ಯ: ಬಿಜೆಪಿ ಕಾರ್ಯಕರ್ತರು ಚೊಂಬು ತೋರಿಸುವ ಮುಖಾಂತರ ರಾಜ್ಯ ಸರ್ಕಾರದ ವಿರುದ್ಧ ವಿಭಿನ್ನ ಪ್ರತಿಭಟನೆ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನಸಾಮಾನ್ಯರಿಗೆ ಬೇಡದ ಭಾಗ್ಯ ಕೊಟ್ಟು ಜನರಿಗೆ ಮೋಸ ಮಾಡಿದ್ದಾರೆ ಎಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರೈತರಿಗೆ ನೀರು ಕೊಡದೆ ತಮಿಳುನಾಡಿಗೆ ನೀರು ಬಿಟ್ಟು ಜಿಲ್ಲೆಯ ರೈತರಿಗೆ ಮೋಸ ಮಾಡಿದ್ದಾರೆ. ದಲಿತರಿಗೆ ಮೀಸಲಿಟ್ಟ SEP TSP ಹಣವನ್ನು ಗ್ಯಾರಂಟಿಗಳಿಗೆ ಬಳಸಿಕೊಂಡು ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಇವರು ಯಾವ ನೈತಿಕತೆಯಿಂದ ಜನರಲ್ಲಿ ಮತ ಕೇಳುತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Previous articleಯತ್ನಾಳ ಯುನಿವರ್ಸಲ್ ಗುರು
Next articleಕಾಂಗ್ರೆಸ್ ಜನರ ಬದುಕಿನ ಗ್ಯಾರಂಟಿ ಕಸಿದುಕೊಂಡಿದೆ