ಜನಿವಾರ ಪ್ರಕರಣ: ತನಿಖೆಗೆ ಖಂಡ್ರೆ ಸೂಚನೆ

0
66

ಬೀದರ್: ಜನಿವಾರ ಧರಿಸಿದ ಅಭ್ಯರ್ಥಿ ಸುಚಿವೃತ ಕುಲಕರ್ಣಿಗೆ ಕೆ-ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವುದನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಘಟನೆ ಕುರಿತಂತೆ ಉಪ-ವಿಭಾಗಾಧಿಕಾರಿ ದರ್ಜೆಯ ಅಧಿಕಾರಿಯಿಂದ ತನಿಖೆ ನಡೆಸಿ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಿ 24 ಗಂಟೆಗಳ ಒಳಗಾಗಿ ವರದಿ ಸಲ್ಲಿಸುವಂತೆ ಬೀದರ್ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

Previous articleಹಣಕಾಸು ಸಂಸ್ಥೆ ಕಿರುಕುಳ ತಾಳಲಾರದೆ ವಿವಾಹಿತ ಆತ್ಮಹತ್ಯೆ
Next articleಕೆಎಫ್‌ಡಿ ಸೋಂಕು: ಬಾಲಕ ಸಾವು