Home ತಾಜಾ ಸುದ್ದಿ ಜಿದ್ದಾಜಿದ್ದಿಯಾಗಲಿದೆ ಮಂಡ್ಯ ಲೋಕಸಭಾ ಕ್ಷೇತ್ರ

ಜಿದ್ದಾಜಿದ್ದಿಯಾಗಲಿದೆ ಮಂಡ್ಯ ಲೋಕಸಭಾ ಕ್ಷೇತ್ರ

0

ಮಂಡ್ಯ: ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ರಾಜಕೀಯ ಅಖಾಡ ರಂಗೇರುತ್ತಿದೆ ಅದರಲ್ಲೂ ಮಂಡ್ಯ ಲೋಕಸಭಾ ಕ್ಷೇತ್ರವು ಈ ಬಾರಿಯೂ ಸದ್ದು ಮಾಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಸ್ಪರ್ಧಿಸಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ನಿಲ್ಲಿಸಿ ಸುಮಲತಾ ಎದುರು ಸೋಲು ಕಂಡಿದ್ದ ಕುಮಾರಸ್ವಾಮಿ ಇದೀಗ ತಾವೇ ಕಣಕ್ಕೆ ಇಳಿಯುವ ಮೂಲಕ ಒಂದೇ ಏಟಿಗೆ ಎರಡು ಹಕ್ಕಿ ಹೊಡೆಯುವ ತವಕದಲ್ಲಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಸುಮಲತಾ ಹಾಗೂ ಕಾಂಗ್ರೆಸ್ ವಿರುದ್ಧ ಸೇಡು ತೀರಿಸಿಕೊಳ್ಳುವ ನಿಟ್ಟಿನಲ್ಲಿ ಎಚ್.ಡಿ. ಕುಮಾರಸ್ವಾಮಿ ರಣತಂತ್ರ ರೂಪಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಹಾಲಿ ಸಂಸದೆ ಸುಮಲತಾ ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೋ ಅಥವಾ ಪಕ್ಷೇತರವಾಗಿ ನಿಲ್ಲುತ್ತರೋ ಎಂಬುದನ್ನು ಇನ್ನೂ ನಿರ್ಧರಿಸಿಲ್ಲ ಇಂದಿನ ಬೆಂಬಲಿಗರ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Exit mobile version