ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ, ಸಹಕಾರ ಸಚಿವ ರಾಜಣ್ಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಇಂಧನ ಸಚಿವ ಜಾರ್ಜ್, ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಯಾಂಕ್ ಖರ್ಗೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣ ಬಸಪ್ಪ ದರ್ಶಾನಪುರ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ, ಪೌರಾಡಳಿತ ಸಚಿವ ರಹೀಮ್ ಖಾನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಹಿರಿಯ ಅಧಿಕಾರಿಗಳು ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಿದರು.