ಜೂ.9ರಿಂದ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ

0
14

ಬೆಳಗಾವಿ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ ಜೂನ್ 9 ರಿಂದ 11 ರವರೆಗೆ ನೆಹರು ನಗರದ ಕೆ.ಎಲ್.ಇ ಡಾ. ಹೆಚ್.ಬಿ ರಾಜಶೇಖರ ಸಭಾ ಭವನದಲ್ಲಿ ನಡೆಯಲಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿಲೀಪ್ ಕುರಂದವಾಡೆ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಪತ್ರಕರ್ತರು, ಸಂಪಾದಕರು ಹಾಗೂ ಸಾಧಕರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಬೆಳಗಾವಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಗೌರವಾಧ್ಯಕ್ಷರಾದ ಡಾ. ಭೀಮಶಿ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಆಗಮಿಸಲಿದ್ದಾರೆ. ಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಎಚ್.ಆರ್. ರಂಗನಾಥ, ವಿ.ಆರ್.ಎಲ್ ಗ್ರೂಪ್ ಪ್ರಧಾನ ವ್ಯವಸ್ಥಾಪಕ ಆನಂದ ಸಂಕೇಶ್ವರ ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ.
ಅತಿಥಿಗಳಾಗಿ ಶ್ರೀಲಂಕಾ ದೇಶದ ಅಂತಾರಾಷ್ಟ್ರೀಯ ಖ್ಯಾತ ಕ್ರಿಕೆಟ್ ಪಟು ಸನತ್ ಜಯಸೂರ್ಯ, ಖ್ಯಾತ ಉದ್ಯಮ

Previous articleಒಂದೇ ದಿನ 4,88,500 ರೂ ದಂಡ!
Next articleಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವು