SK Home Ad
Home ತಾಜಾ ಸುದ್ದಿ ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಖೂಬಾ

ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಖೂಬಾ

0
204

ಬೆಂಗಳೂರು: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಮರಳಿದರು.
ಈ ಹಿಂದೆ ಜೆಡಿಎಸ್ ಪಕ್ಷದಿಂದ ಎರಡು ಬಾರಿ ಬಸವಕಲ್ಯಾಣ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಸೇರಿದ್ದರು. ಇದೀಗ ಮತ್ತೆ ಜೆಡಿಎಸ್ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ.
ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಮನೆಯಲ್ಲೇ ಜೆಡಿಎಸ್‌ ಪಕ್ಷ ಸೇರ್ಪಡೆಗೊಂಡರು.