Home ಅಪರಾಧ ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಚಪ್ಪಲಿ ಹಾಕಿದ ಘಟನೆ ಖಂಡಿಸಿ ಪ್ರತಿಭಟನೆ

ಟಿಪ್ಪುಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಚಪ್ಪಲಿ ಹಾಕಿದ ಘಟನೆ ಖಂಡಿಸಿ ಪ್ರತಿಭಟನೆ

0

ರಾಯಚೂರು: ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಚಪ್ಪಲಿ ಹಾರ ಹಾಕಿರುವ ಘಟನೆ ಖಂಡಿಸಿ ಸಿರವಾರಪಟ್ಟಣದಲ್ಲಿ ನಡೆದಿದೆ.
ಬುಧವಾರ ಮುಸ್ಲಿಂ ಸಮಯದಾಯದವರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸುವ ಆಕ್ರೋಶ ವ್ಯಕ್ತಪಡಿಸಿದರು. ಸಿರವಾರ ಪಟ್ಟಣದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ಸೃಷ್ಠಿಯಾಗಿತ್ತು. ಜಿಲ್ಲೆಯ ಸಿರವಾರ ಪಟ್ಟಣದ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್‌ನಲ್ಲಿರುವ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ರಸ್ತೆ ಮಧ್ಯ ಟೈಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಹಸೀಲ್ದಾರ ಹಾಗೂ ಸಿಪಿಐ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಆರೋಪಿಗಳನ್ನು ಬಂಧಿಸಲಾಗುವುದು. ಸಿ.ಸಿ ಕ್ಯಾಮೆರಾ ಅಳವಡಿಕೆಯ ಭರವಸೆ ನೀಡಿದ ಬಳಿಕ ಪ್ರತಿಭಟನಾ ಹಿಂಪಡೆದರು.

Exit mobile version