ಟಿ.ದಾಸಕರಿಯಪ್ಪ ನಿಧನ

0
39

ದಾವಣಗೆರೆ: ನಾಯಕ ಸಮಾಜದ ಹಿರಿಯರು, ಜೆಡಿಎಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷರು, ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ. ದಾಸಕರಿಯಪ್ಪ ನಗರದ ತಮ್ಮ ಸ್ವಗೃಹದಲ್ಲಿ ಭಾನುವಾರ ತಡರಾತ್ರಿ ನಿಧನರಾದರು.
ಮೃತರಿಗೆ ಪತ್ನಿ, ಪುತ್ರರಾದ ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಟಿ. ಗಣೇಶ ದಾಸಕರಿಯಪ್ಪ, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಟಿ. ಶ್ರೀನಿವಾಸ ದಾಸಕರಿಯಪ್ಪ, ಮೂವರು ಪುತ್ರಿಯರೂ ಸೇರಿದಂತೆ ಅಪಾರ ಬಂಧು-ಬಳಗ ಇದ್ದಾರೆ.
ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ ೨ ಗಂಟೆ ಸ್ವಗ್ರಾಮವಾದ ದಾವಣಗೆರೆ ತಾ. ತುಂಬಿಗೆರೆ ಗ್ರಾಮದಲ್ಲಿರುವ ಅವರ ಜಮೀನಿನಲ್ಲಿ ನಡೆಯಲಿದೆ.

Previous articleಹುಬ್ಬಳ್ಳಿ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ರಘುವೀರಾನಂದ ಇನ್ನಿಲ್ಲ
Next articleರೇಣುಕಾಸ್ವಾಮಿ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು