Home ತಾಜಾ ಸುದ್ದಿ ಡಿಪೋದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಡಿಪೋದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

0
158
ಆತ್ಮಹತ್ಯೆ

ಬೆಂಗಳೂರು: ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ‌ಯ ದೇವನಹಳ್ಳಿ ಪಟ್ಟಣದ ಬಿಎಂಟಿಸಿ ಡಿಪೋದಲ್ಲಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆ ಮಾಡಿಕೊಂಡಿದ್ದು. ತಾಲೂಕಿನ‌ ಆವತಿ ಮೂಲದ ನಾಗೇಶ್ (45) ಆತ್ಮಹತ್ಯೆಗೆ ಶರಣಾದ ಚಾಲಕ. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ನಾಗೇಶ್. ಕಳೆದ ಮಧ್ಯರಾತ್ರಿ ಡಿಪೋಗೆ ಬಂದು ಡಿಪೋ ಮ್ಯಾನೇಜರ್ ಕೊಠಡಿ ಎದುರೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗ್ಗೆ ಸಿಬ್ಬಂದಿಗಳು ನೋಡಿ, ದೇವನಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.