Home ಅಪರಾಧ ಡ್ರಗ್ಸ್ ಕೇಸ್‌ನಿಂದ ನಟಿ ರಾಗಿಣಿ ದ್ವಿವೇದಿ ಕೋರ್ಟಲ್ಲಿ ಖುಲಾಸೆ

ಡ್ರಗ್ಸ್ ಕೇಸ್‌ನಿಂದ ನಟಿ ರಾಗಿಣಿ ದ್ವಿವೇದಿ ಕೋರ್ಟಲ್ಲಿ ಖುಲಾಸೆ

0

ಬೆಂಗಳೂರು: ಮಾದಕ ವಸ್ತು ಸರಬರಾಜು (ಡ್ರಗ್ಸ್) ಆರೋಪದಲ್ಲಿ ಜೈಲು ಪಾಲಾಗಿದ್ದ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಉದ್ಯಮಿಗಳು, ಸೆಲೆಬ್ರೆಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುವ ಮೂಲಕ ಅಕ್ರಮವಾಗಿ ಹಣ ಸಂಪಾದನೆ ಹಾಗೂ ಕಾನೂನುಬಾಹಿರ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಕುರಿತು ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ವಜಾಮಾಡಿದೆ. ಪ್ರಕರಣ ಮತ್ತು ಈ ಸಂಬಂಧ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ರಾಗಿಣಿ ಮತ್ತು ಪ್ರಶಾಂತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ಪೀಠ ಈ ಆದೇಶ ನೀಡಿದೆ.

Exit mobile version