Home ನಮ್ಮ ಜಿಲ್ಲೆ ಕೋಲಾರ ತಾನೇ ಬೈಕಿಗೆ ಬೆಂಕಿ ಹಚ್ಚಿಕೊಂಡು ಸುಳ್ಳು ಮಾಹಿತಿ ಹರಿಬಿಟ್ಟ ವ್ಯಕ್ತಿ

ತಾನೇ ಬೈಕಿಗೆ ಬೆಂಕಿ ಹಚ್ಚಿಕೊಂಡು ಸುಳ್ಳು ಮಾಹಿತಿ ಹರಿಬಿಟ್ಟ ವ್ಯಕ್ತಿ

0

ಕೋಲಾರ: ಸಾಲ ವಸೂಲಿಗೆ ಬಂದ ಸಿಬ್ಬಂದಿ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಡಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಗ್ರಾಮದ ಮಂಜು ಎಂಬ ವ್ಯಕ್ತಿ ತನ್ನ ಬೈಕಿಗೆ ತಾನೇ ಬೆಂಕಿ ಹಚ್ಚಿಕೊಂಡು ಇದನ್ನು ವಿಡಿಯೋ ಮಾಡಿ ಸಾಲ ವಸೂಲಾತಿಗೆ ಬಂದಿದ್ದ ಸಿಬ್ಬಂದಿ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಟ್ಟು ತಪ್ಪು ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆದಿಲ್ಲ, ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿ ಸುಳ್ಳಾಗಿದ್ದು, ಈ ಬಗ್ಗೆ ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Exit mobile version