Home Advertisement
Home ತಾಜಾ ಸುದ್ದಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ

ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ

0
165
Siddaramaiah

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ. ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ. ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದಿದ್ದಾರೆ.
ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ. ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿ.ಟಿ. ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಹೇಳಿದ್ದಾರೆ.