ನವದೆಹಲಿ: ತಿರುಪತಿ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತನಿಖಾ ತಂಡ ರಚನೆಗೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ತಿರುಪತಿ ತಿರುಮಲ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ತಯಾರಿಸುವ ವೇಳೆ ದನ, ಹಂದಿಯ ಕೊಬ್ಬನ್ನು ಬಳಸುತ್ತಾರೆಂಬ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಈ ಬಗ್ಗೆ ಸಿಬಿಐನ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (SIT)ದಿಂದ ತನಿಖೆ
ನಡೆಸುವಂತೆ ಆದೇಶ ನೀಡಿದೆ. ಸಿಬಿಐ ನಿರ್ದೇಶಕರ ನೇತೃತ್ವದಲ್ಲಿ ಇಬ್ಬರು ಸಿಬಿಐ, ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಐವರ ವಿಶೇಷ ತಂಡ ರಚನೆಗೆ ಸುಪ್ರೀಂಕೋರ್ಟ್ ಆದೇಶಿಸಿದೆ. ಪ್ರಕರಣ ಕುರಿತು ತನಿಖೆಗೆ ಆಂಧ್ರ ಸರ್ಕಾರ ಎಸ್ ಐಟಿ ರಚನೆ ಮಾಡಿತ್ತು. ಆಂಧ್ರಪ್ರದೇಶದ ತಿರುಪತಿಯಲ್ಲಿ ಲಡ್ಡುಗಳನ್ನು ತಯಾರಿಸುವಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.
                
























