ತೋಟೇಂದ್ರ ಶ್ರೀಗಳ ಅಳಿಯ ಮಠದಲ್ಲಿ ನೇಣಿಗೆ ಶರಣು

0
113

ಕಲಬುರಗಿ: ಚಿತ್ತಾಪುರ ತಾಲ್ಲೂಕಿನ ಸುಕ್ಷೇತ್ರ ನಾಲವಾರ ಶ್ರೀ ಕೋರಿಸಿದ್ದೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಸಿದ್ದ ತೋಟೇಂದ್ರ ಶಿವಾಚಾರ್ಯ ಅವರ ಅಳಿಯ ಶ್ರೀಮಠದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ಜರುಗಿದೆ.
ನಾಲವಾರ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ಹಿರೇಮಠ(ಗುಂಡು ಮುತ್ಯಾ)(35) ಮೃತ ದುರ್ದೈವಿಯಾಗಿದ್ದಾನೆ. ಮೃತರಿಗೆ ಪತ್ನಿ ಇದ್ದಾರೆ. ಶ್ರೀಕೋರಿಸಿದ್ದೇಶ್ವರ ಮಠದ ಕೋಣೆಯಲ್ಲೇ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ ಎನ್ನುವ ಮಾಹಿತಿ ಗೊತ್ತಾಗಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಾಡಿ ಠಾಣೆಯ ಪಿಎಸ್ಐ ತಿರುಮಲೇಶ್ ಕೆ. ಹಾಗೂ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ.

Previous articleಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ಗೆ ಅಮೇರಿಕಾದ ಉದ್ಯಮಿಯಿಂದ ₹ 1.25 ಕೋಟಿ ದೇಣಿಗೆ
Next articleಅಪ್ರಾಪ್ತೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ