ಬೆಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ಸ್ಥಾನಕ್ಕೆ ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಸ್ಥಾನದ ಮರು ಚುನಾವಣೆ ಅ.21 ರಂದು ಉಪಚುನಾವಣೆ ನಡೆಯಲಿದೆ.
