Home ಅಪರಾಧ ದರ್ಶನ್ ರಾಜಾತಿಥ್ಯ ಪ್ರಕರಣ: ತಪ್ಪಿತಸ್ಥ ಅಧಿಕಾರಿಗಳ ಅಮಾನತು

ದರ್ಶನ್ ರಾಜಾತಿಥ್ಯ ಪ್ರಕರಣ: ತಪ್ಪಿತಸ್ಥ ಅಧಿಕಾರಿಗಳ ಅಮಾನತು

0

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

Exit mobile version