Home ತಾಜಾ ಸುದ್ದಿ ದಾವಣಗೆರೆ ಯುವಕನ ಸಾವು ಲಾಕಪ್ ಡೆತ್ ಅಲ್ಲ: ಪೊಲೀಸರ ಅಮಾನತಿಗೆ ಸೂಚನೆ

ದಾವಣಗೆರೆ ಯುವಕನ ಸಾವು ಲಾಕಪ್ ಡೆತ್ ಅಲ್ಲ: ಪೊಲೀಸರ ಅಮಾನತಿಗೆ ಸೂಚನೆ

0

ಮೈಸೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಮೂರ್ಛೆ ರೋಗದಿಂದ ಮೃತಪಟ್ಟಿದ್ದಾನೆಯೇ ವಿನಃ ಅದು ಲಾಕಪ್ ಡೆತ್ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಚನ್ನಗಿರಿ ಲಾಕಪ್ ಡೆತ್ ಪ್ರಕರಣದ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಅದು ಲಾಕಪ್ ಡೆತ್ ಅಲ್ಲ. ಅವನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಆತ ಮೃತಪಟ್ಟಿದ್ದಾನೆ, ಎಫ್‌ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ. ಆದರೆ ಇದು ಲಾಕಪ್ ಡೆತ್ ಅಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇನೆ ಎಂದರು.

Exit mobile version