ನವದೆಹಲಿ: ದೆಹಲಿ ಮತ್ತು ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋ ಭಾಲೆಸ್ಸಾ ಗ್ರಾಮದ ಬಳಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರ ರಾಜಧಾನಿ ಮತ್ತು ಪಕ್ಕದ ಪ್ರದೇಶಗಳು ಸೇರಿದಂತೆ ಉತ್ತರ ಭಾರತದ ಇತರ ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ. ಇದುವರೆಗೆ ಯಾವುದೇ ಆಸ್ತಿ-ಪಾಸ್ತಿ ಹಾನಿ ಅಥವಾ ಪ್ರಾಣ ಹಾನಿ ವರದಿಯಾಗಿಲ್ಲ.