Home ತಾಜಾ ಸುದ್ದಿ ದೇವಸ್ಥಾನದ ಗೋಡೆ ಕುಸಿದು 7 ಮಂದಿ ಸಾವು, ಹಲವರಿಗೆ ಗಾಯ

ದೇವಸ್ಥಾನದ ಗೋಡೆ ಕುಸಿದು 7 ಮಂದಿ ಸಾವು, ಹಲವರಿಗೆ ಗಾಯ

0

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ದೇವಸ್ಥಾನದ ಗೋಡೆ ಕುಸಿದು 7 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ವಿಶಾಖಪಟ್ಟಣದಲ್ಲಿರುವ ಸಿಂಹಾಚಲಂನ ದೇವಸ್ಥಾನದಲ್ಲಿ ನಡೆಯುತ್ತಿದ್ದ ಚಂದನೋತ್ಸವಂ ವೇಳೆ ಈ ಅವಘಡ ಸಂಭವಿಸಿದ್ದು. ಇಂದು ಬೆಳಗ್ಗೆ ಚಂದನೋತ್ಸವದಲ್ಲಿ ವರಾಹ ಲಕ್ಷ್ಮೀ ನರಸಿಂಹಸ್ವಾಮಿಯ ನಿಜರೂಪ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು. ಇದೇ ವೇಳೆ ದೇವಸ್ಥಾನದಲ್ಲಿ ಇತ್ತೀಚಿಗೆ ನಿರ್ಮಿಸಲಾಗಿದ್ದ 20 ಅಡಿ ಉದ್ದದ ಹೊಸ ಗೋಡೆಯೊಂದು ಕುಸಿದಿದೆ. ಪರಿಣಾಮ ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಗೋಡೆ ಕುಸಿದ ಕಾರಣ ಸ್ಥಳದಲ್ಲಿ ಗೊಂದಲ ಉಂಟಾಗಿತ್ತು. ಅಪಘಾತದ ನಂತರ, ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Exit mobile version