ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ

0
73

ಕಾರವಾರ: ಜಿಲ್ಲೆಯ ಶಿರಸಿ-ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಶುಕ್ರವಾರ ತಡರಾತ್ರಿ ಗುಡ್ಡ ಕುಸಿತವಾಗಿ ಲಘು ವಾಹನಗಳು ಸಂಚಾರಕ್ಕೆ ಪರದಾಡುವಂತಾಯಿತು.
ದೇವಿಮನೆ ಘಟ್ಟದ ಬಳಿ ಹೆದ್ದಾರಿಗಾಗಿ ಕೊರೆದ ಧರೆ ಕುಸಿತವಾಗಿ ಕೆಲಕಾಲ ಸಂಚಾರ ಬಂದ್ ಮಾಡಲಾಗಿತ್ತು. ಬಳಿಕ ಗುತ್ತಿಗೆ ಕಂಪೆನಿ ಮಣ್ಣನ್ನು ತೆರವು ಮಾಡಿದೆ. ಹೆದ್ದಾರಿಯ ಅಲ್ಲಲ್ಲಿ ನಾಲ್ಕು ಕಡೆ ಗುಡ್ಡ ಕುಸಿತವಾಗಿದೆ ಎನ್ನಲಾಗಿದೆ. ಸದ್ಯ ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಅಬ್ಬರಿಸಿದ್ದ ಮಳೆ ಕೊಂಚ ಕಡಿಮೆಯಾಗಿದೆ. ಎರಡು ದಿನಗಳಿಂದ ಜಿಲ್ಲೆಯಲ್ಲಿ ಬಿಟ್ಟು ಬಿಟ್ಟು ಸಾಧಾರಣ ಮಳೆಯಾಗಿದೆ. ಕಾರವಾರದಲ್ಲಿ ಮಳೆಯಿಂದಾಗಿ ಜಲಾವೃತಗೊಂಡಿದ್ದ ಪ್ರದೇಶಗಳಲ್ಲಿ ನೀರು ಇಳಿದಿದ್ದು, ಜನ ಮನೆಗಳನ್ನು ಸ್ವಚ್ಚಗೊಳಿಸಿದ್ದಾರೆ.
ಜಿಲ್ಲೆಯಲ್ಲಿ ಕಳೆದ ೨೪ ಗಂಟೆಗಳಲ್ಲಿ ೪ ಮನೆಗೆ ಭಾಗಶಃ ಹಾನಿ ಸಂಭವಿಸಿದ್ದು, ಅರ್ಗಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರೆಯಲಾಗಿರುವ ಕಾಳಜಿ ಕೇಂದ್ರದಲ್ಲಿ ೩೫ ಮಂದಿಗೆ ಆಶ್ರಯ ಒದಗಿಸಲಾಗಿದೆ.

Previous articleಅಣ್ಣನ ಹತ್ಯೆ: ತಮ್ಮನ ಬಂಧನ
Next articleಗಾಂಜಾ ಮಾರಾಟ: ತಾಯಿ-ಮಗನಿಗೆ ಜೈಲು ಶಿಕ್ಷೆ