Home ಅಪರಾಧ ದೊಡ್ಡಮ್ಮನನ್ನು ಕೊಲೆ ಮಾಡಿ ಪರಾರಿಯಾದ ಆರೋಪಿ ಬಂಧನ

ದೊಡ್ಡಮ್ಮನನ್ನು ಕೊಲೆ ಮಾಡಿ ಪರಾರಿಯಾದ ಆರೋಪಿ ಬಂಧನ

0
arest

ಹುಬ್ಬಳ್ಳಿ: ಬಂಗಾರದ ಆಸೆಗೆ ದೊಡ್ಡಮ್ಮನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕಸಬಾಪೇಟೆ ಠಾಣೆ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ನಗರದ ಮಹಾಂತಯ್ಯ ಚಿಕ್ಕಮಠ ಎಂಬುವನನ್ನು ಕಸಬಾಪೇಟ ಠಾಣೆ ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದು, ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ. ಹಳೇ ಹುಬ್ಬಳ್ಳಿಯ ನೇಕಾರ ನಗರದ ರಣದಮ್ಮ ಕಾಲನಿಯಲ್ಲಿ 2 ತಿಂಗಳ ಹಿಂದೆ ಈ ಘಟನೆ ನಡೆದಿತ್ತು. ಕಲಘಟಗಿ ತಾಲೂಕಿನ ಗಂಭ್ಯಾಪುರದ ಈತ, ಮೃತ ಕಮಲಮ್ಮನ (72) ಸಹೋದರಿ ಪುತ್ರ. ತನ್ನ ದೊಡ್ಡಮ್ಮನ ಮನೆಯಲ್ಲಿಯೇ ಉಳಿದುಕೊಂಡಿದ್ದ ಮಹಾಂತೇಶ, ಕಮಲಮ್ಮನನ್ನು ಕೊಲೆ ಮಾಡಿ ಕಿವಿಯೋಲೆ, ಬೋರಮಾಳ ಕಿತ್ತು ಪರಾರಿಯಾಗಿದ್ದ. ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದ ತಂಡ ಆರೋಪಿತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Exit mobile version