Home Advertisement
Home ಅಪರಾಧ ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ

ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ ಆತ್ಮಹತ್ಯೆ

0
119
ಆತ್ಮಹತ್ಯೆ

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕ ಬಾಲಕೃಷ್ಣ (೫೮) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿಯ ರಾಘವೇಂದ್ರ ನಿಲಯ ಎಂಬಲ್ಲಿ ವಾಸಿಸುತ್ತಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.