Home ತಾಜಾ ಸುದ್ದಿ ಧಮ್ ಇದ್ದರೆ ಶೆಟ್ಟರರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿ..

ಧಮ್ ಇದ್ದರೆ ಶೆಟ್ಟರರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿ..

0

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ಧಮ್ ಇದ್ದರೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರನ್ನು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಶಾಸಕ ಹಾಗೂ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ ಸವಾಲ್ ಹಾಕಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಲಿಂಗಾಯತರನ್ನು ಒಲೈಕೆ ಮಾಡುತ್ತಿಲ್ಲ. ಆ ಕೆಲಸ ಮಾಡುತ್ತಿರುವವರು ಕಾಂಗ್ರೆಸ್ ಪಕ್ಷದವರು. ಲಿಂಗಾಯತರೇ ಆದ ಶೆಟ್ಟರ ಅವರನ್ನು ಸಿಎಂ ಅಭ್ಯರ್ಥಿ ಮಾಡಲಿ ಎಂದರು.
ಬಿಜೆಪಿಗೆ ಲಿಂಗಾಯತರ ಮತಗಳು ಸಾಂಪ್ರದಾಯಿಕ ಮತಗಳು. ಅವು ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ. ಸುಮ್ಮನೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಮೇಲೆ, ಮತ್ತೊಬ್ಬರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಬಿಜೆಪಿ ಎಲ್ಲ ಸಮುದಾಯಕ್ಕೂ ಮೀಸಲಾತಿ ನೀಡಿ ಸಾಮಾಜಿಕ ನ್ಯಾಯ ಎತ್ತಿ ಹಿಡಿದಿದೆ ಎಂದು ತಿಳಿಸಿದರು.

Exit mobile version