ಧರ್ಮದ ಆಧಾರದ ಮೇಲೆ ಮೀಸಲಾತಿ ನಿಗದಿ ಅಸಾಧ್ಯ

0
32

ಹುಬ್ಬಳ್ಳಿ: ಧರ್ಮದ ಆಧಾರದ ಮೇಲೆ ಮೀಸಲಾತಿ ನಿಗದಿ ಸಂವಿಧಾನ ಬಾಹಿರವಾಗುತ್ತದೆ. ಹೀಗಾಗಿ ಮುಸ್ಲಿಮರಿಗೆ ಧರ್ಮದ ಆಧಾರದ ಮೇಲೆ ಮೀಸಲಾತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಏನು ಹೇಳುತ್ತದೆಯೊ ಅದನ್ನು ನಾವು ಮಾಡಿದ್ದೇವೆ. ಇದು ಸಂವಿಧಾನ ಬಾಹಿರ ಎಂಬುದು ಗೊತ್ತಿದ್ದರೂ ಕಾಂಗ್ರೆಸ್ ಮೊದಲಿನಿಂದಲೂ ಮುಸ್ಲಿಮರಿಗೆ ದಿಕ್ಕು ತಪ್ಪಿಸಿಕೊಂಡು ಬಂದಿದೆ ಎಂದು ಆರೋಪಿಸಿದರು.
ಕರ್ನಾಟಕ ಸರ್ಕಾರ ಘೋಷಿಸಿದ ಒಳಮೀಸಲಾತಿ ನಿಗದಿ ನಿಯಮಬದ್ಧವಾಗಿದ್ದು, ಎಲ್ಲ ಸಮುದಾಯಗಳ ಹಿತಕ್ಕೆ ಪೂರಕವಾಗಿದೆ. ಇದರಲ್ಲಿ ಯಾವ ಸಮುದಾಯಕ್ಕೂ ಅನ್ಯಾಯ ಆಗುವ, ಮಾಡುವ ಪ್ರಶ್ನೆ ಇಲ್ಲ ಎಂದು ಶಾ ಸಮರ್ಥಿಸಿಕೊಂಡರು.

Previous articleಸುರಕ್ಷಿತ ಕರ್ನಾಟಕಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೆ
Next articleಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರ ಕೂಪ