ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಲಯ ಸಂಖ್ಯೆ-೧ರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕೆಲವು ದಾಖಲೆಗಳನ್ನು ವಶಕ್ಕೆ ಪಡೆದರು.
ಕಚೇರಿಯಲ್ಲಿ ಸಾರ್ವಜನಿಕರಿಂದ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಹಾಗೂ ಲಂಚ ಪಡೆಯುವ ಕುರಿತು ದೂರುಗಳು ಬಂದಿದ್ದರಿಂದ ಲೋಕಾಯುಕ್ತ ಎಸ್‌ಪಿ ಸತೀಶ ಚಿಟಗುಪ್ಪಿ, ಡಿವೈಎಸ್‌ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಲಾಯಿತು. ಕೆಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಜನನ-ಮರಣ ಪ್ರಮಾಣಪತ್ರ, ಕಟ್ಟಡ ಪರವಾನಗಿ, ಕಟ್ಟಡ ಪೂರ್ಣಗೊಂಡ ಪ್ರಮಾಣಪತ್ರ ನೀಡಲು ಲಂಚ ಪಡೆಯಲಾಗುತ್ತಿದೆ ಅಲ್ಲದೇ ಲಂಚ ನೀಡದಿದ್ದರೆ ದಾಖಲೆಗಳನ್ನು ನೀಡುವಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ದೂರು ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.