Home ನಮ್ಮ ಜಿಲ್ಲೆ ಧೈರ್ಯವಾಗಿ ಪ್ರಶ್ನೆ ಕೇಳುವುದು ಮುಖ್ಯ

ಧೈರ್ಯವಾಗಿ ಪ್ರಶ್ನೆ ಕೇಳುವುದು ಮುಖ್ಯ

0

ಬೆಂಗಳೂರು: ಸಾಮಾಜಿಕ ಸ್ಥಿತಿಗಳ ತಕ್ಕಂತೆ ಬದಲಾವಣೆ ಆಗಬೇಕು. ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ರಾಜ್ಯ ಸರ್ಕಾರ ವಸತಿ ಶಾಲೆಗಳಲ್ಲಿ ಇದುವರೆಗೂ ಇದ್ದ ಜ್ಞಾನ ದೇಗುಲವಿದು ಕೈಮುಗಿದು ಬಾ ಎಂಬ ವಾಕ್ಯವನ್ನು ಜ್ಞಾನ ದೇಗುಲವಿದು ಪ್ರಶ್ನೆ ಮಾಡಿ ಎಂದು ಘೋಷವಾಕ್ಯ ಬದಲಾವಣೆ ವಿಚಾರವಾಗಿ ಮಾತನಾಡಿರುವ ಅವರು ಬದಲಾವಣೆ ಯಾವಾಗಲು ಸಹಜ, ನಮ್ಮ ಸಮಾಜದ ಸ್ಥಿತಿ-ಗತಿಗಳ ತಕ್ಕಂತೆ ಬದಲವಾಣೆ ಆಗಬೇಕಾಗುತ್ತದೆ, ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ, ಕುತೂಹಲ ಇಲ್ಲ ಅಂದರೆ ಕಲಿಕೆ ಬರಲ್ಲ. ಕಲಿಗೆ ಬರಲ್ಲ ಅಂದರೆ ಜ್ಞಾನ ಬರಲ್ಲ. ಸಮಾಜದಲ್ಲಿ ಪ್ರಬುದ್ಧತೆ ಇರಲ್ಲ. ಪ್ರಬುದ್ಧ ಭಾರತ, ಪ್ರಬುದ್ಧ ಸಮಾಜ ಕಟ್ಟಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಅದು ಬೆಳೆಯಬೇಕು ಅಂದ್ರೆ ಪ್ರಶ್ನೆ ಮಾಡಲೇಬೇಕು, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಅದಕ್ಕೆ ಪ್ರಶ್ನೆ ಕೇಳುವುದು ಮುಖ್ಯ. ಎಲ್ಲದಕ್ಕೂ ಉತ್ತರ ಸಿಗಲ್ಲ, ಪ್ರಶ್ನೆ ಮಾಡಿದ್ರೆ ವೈಜ್ಞಾನಿಕ ಮನೋಭಾವ ಬೆಳೆಯುತ್ತೆ. ಶಿಕ್ಷಕರಿಗೆ ಹೊಸ ರೂಪದಲ್ಲಿ ಕಲಿಕೆ ಆಗುತ್ತೆ ಎಂದರು.

Exit mobile version