Home Advertisement
Home ತಾಜಾ ಸುದ್ದಿ ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಗೆ ಬಲಿ

ನಕ್ಸಲ್ ನಾಯಕ ವಿಕ್ರಂ ಗೌಡ ಎನ್ ಕೌಂಟರ್ ಗೆ ಬಲಿ

0
135

ಉಡುಪಿ: ನಕ್ಸಲ್ ನಾಯಕ ಹೆಬ್ರಿ ಸಮೀಪದ ಕಬ್ಬಿನಾಲೆ ಮೂಲದ ವಿಕ್ರಂ ಗೌಡನನ್ನು ನಕ್ಸಲ್ ನಿಗ್ರಹ ದಳ (ಎಎನ್ಎಫ್) ಪೊಲೀಸರು ಸೋಮವಾರ ರಾತ್ರಿ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.
ಕಳೆದ‌ ಕೆಲವು ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಕಂಡುಬಂದ ಹಿನ್ನೆಲೆಯಲ್ಲಿ ಎಎನ್ಎಫ್ ತಂಡ ಕೂಂಬಿಂಗ್ ತೀವ್ರಗೊಳಿಸಿತ್ತು.
ಹೆಬ್ರಿ ಪರಿಸರ ಕಬ್ಬಿನಾಲೆ, ಪೀತೆಬೈಲು ಪರಿಸರದಲ್ಲಿ ನಾಲ್ವರು ನಕ್ಸಲರು ಓಡಾಡುತ್ತಿದ್ದ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಕಾರ್ಯಾಚರಣೆ ನಡೆಸಿದ್ದು, ಈ‌ನಡುವೆ ಎಎನ್ಎಫ್ ಮತ್ತು ನಕ್ಸಲರ‌ ನಡುವೆ ಸೋಮವಾರ ರಾತ್ರಿ ಮುಖಾಮುಖಿಯಾಗಿದ್ದು, ಗುಂಡಿನ ಚಕಮಕಿ ನಡೆದು
ನಕ್ಸಲ್ ನಾಯಕ ವಿಕ್ರಮ್ ಗೌಡನಿಗೆ ಗುಂಡು ತಗುಲಿ ಮೃತಪಟ್ಟಿದ್ದಾನೆ. ಇನ್ನೂ ಮೂವರು ಕಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ.
ಕಾರ್ಕಳ, ಹೆಬ್ರಿ ಸಹಿತ ವಿವಿಧ ಪಶ್ಚಿಮಘಟ್ಟದ ಕಾಡಿನಲ್ಲಿ ಕೂಂಬಿಂಗ್ ಕಾರ್ಯಾಚರಣೆ ತೀವ್ರಗೊಂಡಿದೆ.
ಘಟನೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಮೃತ ವಿಕ್ರಂ ಗೌಡ ನೇತ್ರಾವತಿ ದಳದ ಮುಖ್ಯಸ್ಥನಾಗಿದ್ದ. ಕಸ್ತೂರಿ ರಂಗನ್ ವರದಿ ಅನುಷ್ಠಾನ ಹಿನ್ನೆಲೆಯಲ್ಲಿ ಗುಪ್ತ ಸಭೆ ನಡೆಸಿದ್ದ ವರದಿಯಾಗಿತ್ತು.