Home ನಮ್ಮ ಜಿಲ್ಲೆ ಗದಗ ನಟ ಯಶ್ ಹುಟ್ಟುಹಬ್ಬದ ಬ್ಯಾನರ್ ಕಟ್ಟುವಾಗ ವಿದ್ಯುತ್ ಆಘಾತ: 3 ಯುವಕರ ದುರ್ಮರಣ

ನಟ ಯಶ್ ಹುಟ್ಟುಹಬ್ಬದ ಬ್ಯಾನರ್ ಕಟ್ಟುವಾಗ ವಿದ್ಯುತ್ ಆಘಾತ: 3 ಯುವಕರ ದುರ್ಮರಣ

0

ಗದಗ: ನಟ ಯಶ್ ಹುಟ್ಟುಹಬ್ಬದ ಹಿನ್ನೆಲೆ ಶುಭಾಶಯ ಕೋರುವ ಬ್ಯಾನರ್​ ಕಟ್ಟುವಾಗ ವಿದ್ಯುತ್​ ಪ್ರವಹಿಸಿ ಮೂವರು ಅಭಿಮಾನಿಗಳು ಮೃತಪಟ್ಟ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.
ನಟನ ಹುಟ್ಟುಹಬ್ಬವನ್ನು ಗ್ರಾಮದಲ್ಲಿ ಭರ್ಜರಿಯಾಗಿ ಮಾಡಬೇಕೆಂದು ತಡರಾತ್ರಿ ನಟ ಯಶ್​ನ ಹುಟ್ಟುಹಬ್ಬದ ಬ್ಯಾನರ್ ಕಟ್ಟಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ಯುವಕರು. ಈಗ ಗ್ರಾಮದಲ್ಲಿ ಸೂತಕದ ಛಾಯೆ ಆವರಿಸಿದೆ. ಇನ್ನು ಘಟನೆಯಲ್ಲಿ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ನಟ ಯಶ್ ಹುಟ್ಟುಹಬ್ಬದ ಬ್ಯಾನರ್ ಕಟ್ಟುವಾಗ ವಿದ್ಯುತ್ ಆಘಾತ: 3 ಯುವಕರ ದುರ್ಮರಣ

Exit mobile version