Home ಅಪರಾಧ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ

ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ

0

ಮೈಸೂರು: ಸ್ವಾಮೀಜಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಸ್ವಾಮೀಜಿ ಶಿವಪ್ಪ ದೇವರು(60) ಆತ್ಮಹತ್ಯೆ ಮಾಡಿಕೊಂಡವರೆಂದು ಗುರುತಿಸಲಾಗಿದೆ.
ನಂಜನಗೂಡಿನ ದೇವನೂರು ಮಠದ ಸ್ವಾಮೀಜಿಗಳ ಶಿಷ್ಯರಾಗಿದ್ದ ಇವರು, ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು. ಕಳೆದ 45 ವರ್ಷಗಳಿಂದ ದೇವನೂರು ಮಠದಲ್ಲಿ ಸೇವೆ ಮಾಡಿಕೊಂಡಿದ್ದರು. ಆದರೆ ಅವರ ಸಾವಿಗೆ ಕಾರಣ ಏನು ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.

Exit mobile version