SK Home Ad
Home ತಾಜಾ ಸುದ್ದಿ ನನಗೆ ಸಹೋದರಿಯೇ ಇಲ್ಲ, ಗೋಪಾಲ್ ಜೋಶಿ ಜತೆ ಸಂಪರ್ಕವೂ ಇಲ್ಲ…

ನನಗೆ ಸಹೋದರಿಯೇ ಇಲ್ಲ, ಗೋಪಾಲ್ ಜೋಶಿ ಜತೆ ಸಂಪರ್ಕವೂ ಇಲ್ಲ…

0
172

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ದಾಖಲಾಗಿರುವ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದ ಬಗ್ಗೆ ಹೀಗೆ ಸ್ಪಷ್ಟನೆ ನೀಡಿದ ಅವರು, ಬೆಂಗಳೂರಿನಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ವಿಜಯಲಕ್ಷ್ಮಿ ನನ್ನ ಸಹೋದರಿ ಎಂದು ಉಲ್ಲೇಖಿಸಿದ್ದಾರೆ. ವಾಸ್ತವವಾಗಿ ನನಗೆ ಸಹೋದರಿಯೇ ಇಲ್ಲ. ಇದನ್ನೆಲ್ಲ ನೋಡಿದರೆ ಎಲ್ಲ ಬೋಗಸ್ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇನ್ನು, ನನ್ನ ತಾಯಿಗೆ ಗೋಪಾಲ್ ಜೋಶಿ ಸೇರಿ ನಾಲ್ವರು ಮಕ್ಕಳು. ಆದರೆ, ಗೋಪಾಲ್ ಜೋಶಿ ಅವರೊಡನೆ ನನಗೆ ಕಳೆದ 32 ವರ್ಷಗಳಿಂದ ಯಾವುದೇ ಸಂಪರ್ಕವಿಲ್ಲ ಎಂದು ಆರೋಪವನ್ನು ತಳ್ಳಿ ಹಾಕಿದ್ದಾರೆ.
ಈ ಪ್ರಕರಣದಲ್ಲಿ ನನಗೂ, ನನ್ನ ಕುಟುಂಬಕ್ಕೂ ಹಾಗೂ ಬಿಜೆಪಿ ಪಕ್ಷಕ್ಕೂ ಸಹ ಸಂಬಂಧವಿಲ್ಲ. ಗೋಪಾಲ್ ಜೋಶಿ ಹಣ ಪಡೆದಿದ್ದಾರೋ ಇಲ್ಲವೋ ಗೊತ್ತಿಲ್ಲ. ಇದು ತನಿಖೆಯಿಂದ ಸಾಬೀತಾಗಬೇಕಿದೆ ಅಷ್ಟೇ ಎಂದು ಪ್ರಲ್ಹಾದ ಜೋಶಿ ಪ್ರತಿಕ್ರಿಯಿಸಿದರು.