Home ನಮ್ಮ ಜಿಲ್ಲೆ ಚಿಕ್ಕಮಗಳೂರು ನಮ್ಮದು ಸಣ್ಣ ಪಕ್ಷ – ಅವರು ಇಂಟರ್‌ನ್ಯಾಷನಲ್ ಪಕ್ಷದ ಜೊತೆ ಹೋಗಿದ್ದಾರೆ

ನಮ್ಮದು ಸಣ್ಣ ಪಕ್ಷ – ಅವರು ಇಂಟರ್‌ನ್ಯಾಷನಲ್ ಪಕ್ಷದ ಜೊತೆ ಹೋಗಿದ್ದಾರೆ

0
kumaraswamy

ಕಡೂರು/ ಬೀರೂರ: ಹಾಸನ ಟಿಕೆಟ್‌ ಗೊಂದಲ ವಿಚಾರವಾಗಿ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು,
ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಲಾಗುವುದು. ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಗೆಲ್ಲುವ ಶಕ್ತಿ ಜೆಡಿಎಸ್‌ಗೆ ಇದೆ. ಈ ವಿಚಾರದಲ್ಲಿ ನನ್ನ ಸ್ಟ್ಯಾಂಡ್ ಎಂದಿಗೂ ಬದಲಾಗಲ್ಲ ಎಂದರು, ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ ಕಾರಣ ವೈಎಸ್‌ವಿ ದತ್ತಾ ಅವರು ಮತ್ತೆ ಜೆಡಿಎಸ್‌ ಸೇರುವ ವಿಚಾರವಾಗಿ ವೈಎಸ್‌ವಿ ದತ್ತಾ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿದ್ದಾರೆ. ಚಿಕ್ಕಮಗಳೂರಿನ ಬೀರೂರು ಪಟ್ಟಣದಲ್ಲಿ ಮಾತನಾಡಿದ ಅವರು, ನಮ್ಮದು ಸಣ್ಣ ಪಕ್ಷ, ವೈಎಸ್‌ವಿ ದತ್ತಾ ಅವರು ಇಂಟರ್‌ನ್ಯಾಷನಲ್ ಪಕ್ಷದ ಜೊತೆ ಹೋಗಿದ್ದಾರೆ. ನಮ್ಮ ಸಣ್ಣ ಪಕ್ಷದಲ್ಲಿ ಅವರಿಗೆ ಏನು ಸಿಗುತ್ತದೆ. ಅವರಿಗೆ ಎಲ್ಲಿದೆ ಜಾಗ. ವೈಎಸ್‌ವಿ ದತ್ತಾ ಅವರ ಬಗ್ಗೆ ನಾನು ಏನು ಚರ್ಚೆ ಮಾಡಲ್ಲ, ನನ್ನ ಪಕ್ಷದಲ್ಲಿ ಪಾಪ ಅವರಿಗೆ ಏನು ಸಿಗುತ್ತೆ ಅವರು ದೊಡ್ಡ ಪಕ್ಷದಲ್ಲೇ ಇರಲಿ ಎಂದರು

Exit mobile version