Home ನಮ್ಮ ಜಿಲ್ಲೆ ನರಳುವವರಿಗೆ ನೆರವಾದರೆ ಮಾತ್ರ ಸಾರ್ಥಕತೆ

ನರಳುವವರಿಗೆ ನೆರವಾದರೆ ಮಾತ್ರ ಸಾರ್ಥಕತೆ

0

ಬೆಂಗಳೂರು: ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ, ಇನ್ ಸೈಟ್ ಐಎಎಸ್ ಅಕಾಡೆಮಿ ಇಂದು ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿ ಮಾತನಾಡಿದ ಅವರು ಉತ್ತರದಾಯಿತ್ವ ಇರುವ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಅಗತ್ಯ ನಮ್ಮ ದೇಶಕ್ಕೆ ಹೆಚ್ಚಾಗಿದೆ. ಉತ್ತರದಾಯಿತ್ವ ಇಲ್ಲದಿದ್ದರೆ ನಾವು ಆ ಸ್ಥಾನದಲ್ಲಿ, ಆ ಹುದ್ದೆಯಲ್ಲಿರಲು ಅನರ್ಹರು. ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕೆಲಸ ಮಾಡುವ ಹೊಣೆಗಾರಿಕೆ ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳ ಮೇಲಿರುತ್ತದೆ. ಬಹುಸಂಖ್ಯಾತ ಸಮುದಾಯ ಅಕ್ಷರ ಕಲಿಕೆಯಿಂದ ವಂಚಿತವಾಗಿದೆ. ಇದಕ್ಕೆ ಸಮಾಜದಲ್ಲಿರುವ ಅಸಮಾನತೆ ಕಾರಣ. ಈ ಅಸಮಾನತೆಯನ್ನು ಅಳಿಸಲು ಸಾಧ್ಯವಾಗದಿದ್ದರೆ, ಆ ದಿಕ್ಕಿನಲ್ಲಿ ಶ್ರಮಿಸದಿದ್ದರೆ ನಾವು ಜನಪ್ರತಿನಿಧಿಗಳಾಗಿ, ಐಎಎಸ್-ಕೆಎಎಸ್ ಅಧಿಕಾರಿಗಳಾಗಿ ಏನು ಪ್ರಯೋಜನ? ಸಮಾಜದಲ್ಲಿನ ಅಸಮಾನತೆ, ತಾರತಮ್ಯ ಅಳಿಸಲು ಯತ್ನಿಸದೇ ಹೋದರೆ ಈ ದೇಶದ ಜನರೇ ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯದ ಸೌಧವನ್ನು ಧ್ವಂಸ ಮಾಡುತ್ತಾರೆ ಎನ್ನುವ ಎಚ್ಚರಿಕೆಯ ಮಾತನ್ನು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದರು. ಈ ಎಚ್ಚರಿಕೆಯ ಮಾತನ್ನು ನೆನಪಿನಲ್ಲಿ ಇಟ್ಟುಕೊಂಡು ಅಸಮಾನತೆ, ತಾರತಮ್ಯವನ್ನು ಅಳಿಸಬೇಕು. ಹಸಿದವರಿಗೆ ಮಾತ್ರ ಊಟದ ಮಹತ್ವ ಗೊತ್ತಿರುತ್ತದೆ. ಹಸಿವಿನಿಂದ ನರಳುವವರಿಗೆ ನೆರವಾದರೆ ಮಾತ್ರ ಐಎಎಸ್, ಕೆಎಎಸ್ ನಲ್ಲಿ ಟಾಪರ್ಸ್ ಆಗಿರುವುದಕ್ಕೂ ಸಾರ್ಥಕತೆ ಬರುತ್ತದೆ. ಹೀಗಾಗಿ ಹಸಿವು ಗೊತ್ತಿರುವ ಹಳ್ಳಿ ಮಕ್ಕಳನ್ನು ಐಎಎಸ್‌ಗಳಾಗಿ ಮಾಡಬೇಕು ಎಂದರು.

Exit mobile version