Home ನಮ್ಮ ಜಿಲ್ಲೆ ನವಜಾತ ಶಿಶುವನ್ನು ಕಚ್ಚಿಕೊಂಡು ಓಡಾಡಿದ ನಾಯಿ

ನವಜಾತ ಶಿಶುವನ್ನು ಕಚ್ಚಿಕೊಂಡು ಓಡಾಡಿದ ನಾಯಿ

0
ಶಿಸು

ಶಿವಮೊಗ್ಗ: ನಾಯಿಯೊಂದು ನವಜಾತ ಹೆಣ್ಣು ಶಿಶುವನ್ನು ಕಚ್ಚಿಕೊಂಡು ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಓಡಾಡಿದೆ. ಸಾರ್ವಜನಿಕರು, ಭದ್ರತಾ ಸಿಬ್ಬಂದಿ ನಾಯಿಯನ್ನು ಓಡಿಸಿ, ಶಿಶುವನ್ನು ಪರೀಕ್ಷಿಸಿದಾಗ ಮೃತಪಟ್ಟಿರುವುದು ಗೊತ್ತಾಗಿದೆ. ಜನಿಸಿದ ನಂತರ ಯಾರೋ‌ ಮಗುವನ್ನು ವಾರ್ಡ್ ಹಿಂಭಾಗದಲ್ಲಿ ಬಿಟ್ಟು ಹೋಗಿದ್ದಾರೆ. ನಂತರ ನಾಯಿ ಅದನ್ನು‌ ಕಚ್ಚಿಕೊಂಡು ಓಡಾಡಿದೆ. ಮಗುವನ್ನು ಬಿಟ್ಟು ಹೋದ ಪೋಷಕರ ಪತ್ತೆ ಹೆಚ್ಚುವಂತೆ ಆಸ್ಪತ್ರೆಯ ಸಿಬ್ಬಂದಿ ಆಗ್ರಹಿಸಿದ್ದಾರೆ. ಘಟನೆ ಕುರಿತು ದೊಡ್ಡಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Exit mobile version