Home ತಾಜಾ ಸುದ್ದಿ ನವಲಗುಂದ ಕ್ಷೇತ್ರ: ಕೋನರಡ್ಡಿ, ಅಸೂಟಿ ಹೊಸ ತಂತ್ರ

ನವಲಗುಂದ ಕ್ಷೇತ್ರ: ಕೋನರಡ್ಡಿ, ಅಸೂಟಿ ಹೊಸ ತಂತ್ರ

0

ಹುಬ್ಬಳ್ಳಿ: ನವಲಗುಂದ ಕ್ಷೇತ್ರದಲ್ಲೂ ಟಿಕೆಟ್‌ಗೆ ಕೈ ನಾಯಕರು ಬಾರಿ ಪೈಪೋಟಿ ನಡೆಸಿದ್ದಾರೆ. ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ್ ಅಸೂಟಿ ಅವರು ಒಟ್ಟಾಗಿಯೇ ಶನಿವಾರ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಗಳು ಬಹಳ ಜನ ಇದ್ದಾರೆ ಆದರೆ, ನಮ್ಮಿಬ್ಬರಲ್ಲಿ ಯಾರಿಗಾದರೂ ಟಿಕೆಟ್ ಫೈನಲ್ ಮಾಡಿ. ಯಾರಿಗೆ ಟಿಕೆಟ್ ಸಿಕ್ಕರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ಯಾವುದೇ ಕಾರಣಕ್ಕೂ ನವಲಗುಂದ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಶಂಕರ ಪಾಟೀಲ ಮುನೇನಕೊಪ್ಪ ಅವರು ಆಯ್ಕೆ ಆಗದ ರೀತಿ ಕೆಲಸ ಮಾಡುತ್ತೇವೆ ಎಂದು ಹೇಳಿಕೊಂಡಿದ್ದಾರೆ.
ಹೀಗಾಗಿ, ಇಬ್ಬರಲ್ಲಿ ಯಾರಿಗಾದರೊಬ್ಬರಿಗೆ ಟಿಕೆಟ್ ಫೈನಲ್ ಆಗುವ ಸಾಧ್ಯತೆ ಹೆಚ್ಚಾಗಿದೆ.‌ ನವಲಗುಂದ ಕ್ಷೇತ್ರಕ್ಕೆ ಮಾಜಿ ಸಚಿವ ಕೆ.ಎನ್ ಗಡ್ಡಿ, ವಿಜಯ ಕುಲಕರ್ಣಿ, ರಾಜಶೇಖರ ಮೆಣಸಿನಕಾಯಿ, ಬಾಪುಗೌಡ ಪಾಟೀಲ ಸೇರಿದಂತೆ ಹನ್ನೊಂದ ಜನ ಟಿಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Exit mobile version