ನಾಗೇಂದ್ರ ಸಂಪುಟ ಸೇರ್ಪಡೆ ವಿಷಯ ಗೊತ್ತಿಲ್ಲ

0
28

ಗದಗ: ವಾಲ್ಮೀಕಿ ಹಗರಣದಲ್ಲಿ ಸಚಿವ ಸ್ಥಾನ ಕಳೆದುಕೊಂಡಿರುವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಅಥವಾ ಸಚಿವ ಸಂಪುಟ ಪುನಾರಚನೆ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಡಾ. ಎಚ್.ಕೆ. ಪಾಟೀಲ ಸ್ಪಷ್ಟಪಡಿಸಿದರು.
ನಗರದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಪುನಾರಚನೆ, ಅಥವಾ ನಾಗೇಂದ್ರ ಸೇರ್ಪಡೆ ಬಗ್ಗೆ ನಮ್ಮ ಜೊತೆ ಚರ್ಚಿಸಿಲ್ಲ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು. ಸಂಪುಟ ಪುನಾರಚನೆ ಬಗ್ಗೆ ನನಗೇನೂ ಗೊತ್ತಿಲ್ಲ. ನಾಗೇಂದ್ರ ಸಚಿವ ಸಂಪುಟ ಸೇರ್ಪಡೆ ಬಗ್ಗೆ ಸಿಎಂ ಹೇಳಿಕೆ ನೋಡಿಲ್ಲವೆಂದು ಸ್ಪಷ್ಟಪಡಿಸಿದರು.

Previous articleಶಾಸಕ ಸತೀಶ್ ಸೈಲ್‌ ಸೇರಿ ಇತರರಿಗೆ ಜಾಮೀನು
Next articleಪುನೀತ್ ಕೆರೆಹಳ್ಳಿ ವಿರುದ್ಧ ದೂರು ದಾಖಲು