Home Advertisement
Home ನಮ್ಮ ಜಿಲ್ಲೆ ಉತ್ತರ ಕನ್ನಡ ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ..

ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ..

0
77

ಬೆಂಗಳೂರು: ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿದು 7 ಜನ ಸಾವನ್ನಪ್ಪಿದ್ದ ಶಿರೂರು ಗ್ರಾಮಕ್ಕೆ ನಾನು ಶನಿವಾರ ಭೇಟಿ ನೀಡಿದಾಗ ಈ ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಲೇವಡಿ ಮಾಡಿದ್ದರು!
ಮಿಲಿಟರಿಯನ್ನು ಕರೆತಂದು ಫೀಲ್ಡಿಗೆ ಇಳಿಸಬೇಕಾಗಿತ್ತು. ಅವರೊಬ್ಬರೇ ಬಂದು ಏನು ಮಾಡುತ್ತಾರೆ ಎಂದು ಲಘುವಾಗಿ ಮಾತನಾಡಿದ್ದರು!! ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದರು. ಇದು ದುರ್ದೈವದ ಸಂಗತಿ. ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರಕಾರವನ್ನೂ ಟೀಕಿಸಿಲ್ಲ. ಆದರೂ, ನೊಂದ ಕುಟುಂಬಗಳ ಕಣ್ಣೀರಿಗೆ ಓಗೊಟ್ಟು ನಮ್ಮ ಹೆಮ್ಮೆಯ ಸೇನೆಯ 40ಕ್ಕೂ ಹೆಚ್ಚು ವೀರಯೋಧರು ರಕ್ಷಣಾ ಕಾರ್ಯಕ್ಕೆ ಧಾವಿಸಿ, ರಕ್ಷಣಾ ಕಾರ್ಯಕ್ಕೆ ಮತ್ತಷ್ಟು ವೇಗ ನೀಡಿದ್ದಾರೆ. ಇದಕ್ಕೆ ಡಿಸಿಎಂ ಅವರ ಆಕ್ಷೇಪಣೆ ಇದೆಯಾ? ಈ ಬಗ್ಗೆ ಅವರೇ ಉತ್ತರಿಸಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ನಾನು ಎನ್ನುವುದು ಅಹಂಕಾರ, ನಾವು ಎನ್ನುವುದು ಸಂಸ್ಕಾರ.. ಇಷ್ಟು ಸರಳ ಸಾಮರಸ್ಯ ತತ್ತ್ವವೂ ಡಿಸಿಎಂ ಆಗಿರುವ ವ್ಯಕ್ತಿಗೆ ತಿಳಿದಿಲ್ಲ ಎಂದರೆ, ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ ಎಂದಿದ್ದಾರೆ.

Previous articleಆರ್‌ಎಸ್‌ಎಸ್‌: ಸರ್ಕಾರಿ ಸಿಬ್ಬಂದಿಗಳಿಗೆ ವಿಧಿಸಿದ್ದ ನಿಷೇಧ ವಾಪಸ್
Next articleರಾಜ್ಯದಲ್ಲಿ ಕಾಂಗ್ರೆಸ್ ಬಿಜೆಪಿ ಹೊಂದಾಣಿಕೆ ರಾಜಕಾರಣ