ನಾನು ಯಾವತ್ತೂ ರೆಬೆಲ್ ಅಲ್ಲ

0
19

ವಿಜಯಪುರ: ನಾನು ಯಾವತ್ತು ರೆಬೆಲ್ ಅಲ್ಲ, ಹಿಂದೆಯೂ ರೆಬೆಲ್ ಇರಲಿಲ್ಲ, ಮುಂದೆಯೂ ಇರುವುದಿಲ್ಲ ಎಂದು ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ತಮ್ಮನ್ನು ರೆಬೆಲ್ ಆಗಿ ಬಿಂಬಿಸುತ್ತಿರುವುದು ಸರಿಯಲ್ಲ, ಹಿಂದೆಯೂ ರೆಬೆಲ್ ಇರಲಿಲ್ಲ, ಮುಂದೆಯೂ ಇರುವುದಿಲ್ಲ, ಡಿಸಿಎಂ ಸ್ಥಾನ ಬಗ್ಗೆ ಚರ್ಚೆಯೂ ನಡೆಯುತ್ತಿಲ್ಲ, ರಾಜ್ಯದಲ್ಲಿ ಕಾಂಗ್ರೆಸ್ ಐದು ವರ್ಷ ಪೂರೈಸುತ್ತದೆ, ಬೀಳುತ್ತದೆ, ಏಳುತ್ತದೆ ಎಂದೆಲ್ಲಾ ಹೇಳುತ್ತಾರೆ, ಆದರೆ ಕಾಂಗ್ರೆಸ್ ಸರ್ಕಾರ ಐದು ವರ್ಷ ಸಂಪೂರ್ಣವಾಗಿ ಅಸ್ತಿತ್ವದಲ್ಲಿರುತ್ತದೆ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕೋವಿಡ್ ಕಾಲಘಟ್ಟದಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬ ಶಾಸಕ ಯತ್ನಾಳರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಅವ್ಯವಹಾರ ತನಿಖೆ ಮಾಡಲು ಒಂದು ತನಿಖಾ ತಂಡ ರಚನೆಯಾಗಿದೆ, ಈ ತನಿಖಾ ತಂಡ ವರದಿ ನೀಡಲಿದೆ, ವರದಿ ಬಂದ ಬಳಿಕವೇ ಈ ಬಗ್ಗೆ ಪ್ರತಿಕ್ರಿಯೆ ನೀಡುವೆ ಎಂದರು.

Previous articleಬಿಜೆಪಿ ನಾಯಕರು ರೈತರ ಕಲ್ಯಾಣಕ್ಕಾಗಿ ಏನು ಮಾಡಿದ್ದಾರೆ?
Next articleಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಓರ್ವ ಸಜೀವ ದಹನ