Home ತಾಜಾ ಸುದ್ದಿ ನಾಮಪತ್ರ ವಾಪಸ್ ಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ

ನಾಮಪತ್ರ ವಾಪಸ್ ಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ

0
92

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಉಪ ಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಮಾಜಿ ಶಾಸಕ ಸೈಯದ್‌ ಅಜ್ಜಂಪೀರ್‌ ಖಾದ್ರಿ ನಾಮಪತ್ರ ಹಿಂಪಡೆದಿದ್ದಾರೆ.
ಈ ಸಂದರ್ಭದಲ್ಲಿ ಜಮೀರ್‌ ಅಹ್ಮದ್‌ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಕೂಡ ಜೊತೆಗಿದ್ದರು, ನಾಮಪತ್ರ ಹಿಂಪಡೆದಿರುವ ಅಜ್ಜಂಪೀರ್ ಖಾದ್ರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿರುವ ಯಾಸೀರ್‌ ಅಹಮದ್‌ ಖಾನ್‌ ಅವರ ಗೆಲುವಿಗೆ ಕೈ ಜೋಡಿಸಿ, ನಾವೆಲ್ಲ ಒಂದಾಗಿ ಕಾಂಗ್ರೆಸ್‌ ಪಕ್ಷದ ಜಯಭೇರಿಗೆ ಕೆಲಸ ಮಾಡೋಣ ಎಂದಿದ್ದಾರೆ.

ಇನ್ನು ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ ಅಹ್ಮದ್ ಖಾನ್ ಸರ್ಕಾರಿ ನಿವಾಸದಲ್ಲಿ ಇದ್ದರು. ಅಜ್ಜಂಪೀರ್ ಖಾದ್ರಿಯಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿ ಡಿಕೆ ಶಿವಕುಮಾರ್ ಅವರನ್ನು ಜಮೀರ್ ಭೇಟಿ ಮಾಡಿಸಿದ್ದರು. ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾದ ಬೆನ್ನಲ್ಲೆ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು. ಇದೀಗ ಇಂದು ಅಜ್ಜಂಪೀರ್ ಖಾದ್ರಿ ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೊತೆಗೆ ಬಂದು ನಾಮಪತ್ರ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.