Home ನಮ್ಮ ಜಿಲ್ಲೆ ಧಾರವಾಡ ನಾಮಪತ್ರ ವಾಪಸ್

ನಾಮಪತ್ರ ವಾಪಸ್

0

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್-73 ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ನವಾಜ್ ಕಿತ್ತೂರು ಸೋಮವಾರ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸೂಚನೆಯ ಮೇರೆಗೆ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಡಿಸಿಸಿ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ನೇತೃತ್ವದಲ್ಲಿ ಸೋಮವಾರ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ತೀರ್ಮಾನವಾದ ಪ್ರಕಾರ ಉಮೇದುವಾರಿಕೆಯನ್ನು ಹಿಂಪಡೆಯಲಾಗಿದೆ ಎಂದು ಅಲ್ತಾಫ್ ಕಿತ್ತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version