ನಾಲ್ವರು ಕ್ರೀಡಾ ಸಾಧಕರಿಗೆ ಮೇಜರ್ ಧ್ಯಾನ್ ​ಚಂದ್‌ ಖೇಲ್ ರತ್ನ ಪ್ರಶಸ್ತಿ

0
32

ನವದೆಹಲಿ: ಮನು ಭಾಕರ್ ಸೇರಿದಂತೆ ನಾಲ್ವರು ಕ್ರೀಡಾ ಸಾಧಕರಿಗೆ ಮೇಜರ್ ಧ್ಯಾನ್ ​ಚಂದ್‌ ಖೇಲ್​ ರತ್ನ ಪ್ರಶಸ್ತಿಗೆ ಹಾಗೂ ಜ್ಯೋತಿ ಯರ್ರಾಜಿ, ಅನ್ನು ರಾಣಿ, ಮತ್ತು ವಾಂತಿಕಾ ಅಗರವಾಲ್ ಸೇರಿದಂತೆ 32 ಕ್ರೀಡಾ ಸಾಧಕರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶಕ್ಕಾಗಿ ಎರಡು ಕಂಚಿನ ಪದಕಗಳನ್ನು ಗೆದ್ದುಕೊಟ್ಟಿದ್ದ ಮಹಿಳಾ ಶೂಟರ್ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್​ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದ 18 ವರ್ಷದ ಚೆಸ್ ಚತುರ ಡಿ ಗುಕೇಶ್, ಭಾರತದ ಪುರುಷರ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಪ್ಯಾರಾಲಿಂಪಿಯನ್ ಪ್ರವೀಣ್ ಕುಮಾರ್ ಖೇಲ್ ರತ್ನ ಪ್ರಶಸ್ತಿಗೆ ಭಾಜನರಾದವರು. ಜನವರಿ 17 ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ವಿಶೇಷವಾಗಿ ಆಯೋಜಿಸಲಾಗುವ ಸಮಾರಂಭದಲ್ಲಿ ಈ ನಾಲ್ವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Previous articleಟೀಂ ಇಂಡಿಯಾ ಜೆರ್ಸಿ ತೊಟ್ಟ ವಿನೋದ್ ಕಾಂಬ್ಳಿ
Next articleಪರಿಚಾರಕನ ಭಕ್ತಿ: ಸಂತನ ನೆನಪಲ್ಲಿ ಅನ್ನ ಸಂತರ್ಪಣೆ