ನಾಳೆಯಿಂದ ೧೪ ಜಿಲ್ಲೆಗಳಲ್ಲಿ ಬಿಸಿ ಗಾಳಿ ಎಚ್ಚರಿಕೆ

0
14

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಕಾಲ ಅಲ್ಪ ಪ್ರಮಾಣದ ಮಳೆಯಾದರೂ ಬಿಸಿಯ ತಾಪ ಕಡಿಮೆಯಾಗಿಲ್ಲ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಶುಕ್ರವಾರದಿಂದ ಒಂದು ವಾರ ಕಾಲ ೧೪ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.ಕಳೆದ ಒಂದು ವಾರದಲ್ಲಿ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಿದ್ದರೂ. ಬಿಸಿಯ ವಾತಾವರಣ ಮತ್ತಷ್ಟು ಹೆಚ್ಚಳವಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಶುಕ್ರವಾರದಿಂದ ಒಂದು ವಾರ ಕಾಲ ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಬಿಸಿ ಗಾಳಿಯ ವಾತಾವರಣ ಕಾಣಿಸಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ. ಬಿಸಿಯ ವಾತಾವರಣದ ನಡುವೆ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಗಾಳಿ ಜೊತೆಗೆ ಅಲ್ಪ ಪ್ರಮಾಣದ ಮಳೆಯೂ ಆಗುವ ಸಾಧ್ಯತೆಗಳಿವೆ. ಆದರೆ, ಇದು ಕೆಲವೇ ಪ್ರದೇಶಗಳಿಗೆ ಮಾತ್ರ ಸೀಮಿತವಾಗಲಿದೆ ಎಂದಿದೆ.

Previous articleಭಗವಂತನ ಮೌಲ್ಯಗಳ ಉಪಾಸನೆ ಇರಲಿ
Next articleಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ