ಬೆಂಗಳೂರು: ನಾಳೆ ಮದ್ಯದ ಅಂಗಡಿಗಳನ್ನು ಬಂದ್ ಮಾಡುವುದಿಲ್ಲ ಒಂದು ವೇಳೆ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ಮತ್ತೆ ಹೋರಾಟ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ತಿಳಿಸಿದೆ.
ರಾಜ್ಯ ಮದ್ಯ ಮಾರಾಟಗಾರರ ಸಂಘ ನಾಳೆ ನ. ೨೦ರಂದು ಮದ್ಯದಂಗಡಿಗಳನ್ನು ಬಂದ್ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಮದ್ಯ ಮಾರಾಟಗಾರರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಸರ್ಕಾರ ಭರವಸೆ ನೀಡಿರುವ ಹಿನ್ನಲೆಯಲ್ಲಿ ಮುಷ್ಕರವನ್ನು ಹಿಂಪಡೆದಿರುವುದಾಗಿ ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಪದಾಧಿಕಾರಿಗಳು ತಿಳಿಸಿದ್ದಾರೆ. ಸಮಸ್ಯೆ ಮತ್ತು ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿಗಳೇ ಭರವಸೆ ನೀಡಿರುವುದರಿಂದ ನಾಳೆ ಮದ್ಯದ ಅಂಗಡಿಗಳನ್ನು ಬಂದ್ ಮಾಡುವುದಿಲ್ಲ ಒಂದು ವೇಳೆ ಸಮಸ್ಯೆಗಳಿಗೆ ಪರಿಹಾರ ಸಿಗದಿದ್ದರೆ ಮತ್ತೆ ಹೋರಾಟ ಮಾಡುವುದಾಗಿ ಮದ್ಯ ಮಾರಾಟಗಾರರ ಸಂಘ ಎಚ್ಚರಿಕೆ ನೀಡಿದೆ.